ಬೆಂಗಳೂರು, ಏ 11 (DaijiworldNews/HR): ನ್ಯಾಷನಲ್ ಹೆರಾಲ್ಡ್ ಭಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಭಷ್ಟ್ರಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರಿಗೆ ಸಂಕಷ್ಟ ಎದುರಾಗಿದ್ದು, ಇಂದು ಇಡಿ ಮಲ್ಲಿಕಾರ್ಜುನ ಖರ್ಗೆಯವರನ್ನು ವಿಚಾರಣೆಗೆ ಒಳಪಡಿಸಿದೆ.
ಇನ್ನು ನ್ಯಾಷನಲ್ ಹೆರಾಲ್ಡ್ ಭಷ್ಟ್ರಾಚಾರ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದ್ದು, ಅದರಂತೆ ಇಂದು ದೆಹಲಿಯ ಇಡಿ ಕಚೇರಿಗೆ ಮಲ್ಲಿಕಾರ್ಜುನ ಖರ್ಗೆ ತೆರಳಿದ್ದಾರೆ.