ಮೈಸೂರು, ಏ 11 (DaijiworldNews/HR): ಹಾಲಿನ ದರ ಹೆಚ್ಚಳ ಮಾಡುವ ಪ್ರಸ್ತಾಪ ಇಲ್ಲ. ಆಯಾ ಹಾಲು ಒಕ್ಕೂಟದವರು ಲಾಭಾಂಶದಲ್ಲಿ ರೈತರಿಗೆ ಕೊಡಬಹುದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಹಾಲಿನ ದರವನ್ನು ಹೆಚ್ಚಳ ಮಾಡುವುದಿಲ್ಲ. ಆಯಾ ಹಾಲು ಒಕ್ಕೂಟದವರು ಲಾಭಾಂಶದಲ್ಲಿ ರೈತರಿಗೆ ಕೊಡಬಹುದು ಎಂದಿದ್ದಾರೆ.
ಇನ್ನು ಚಂದ್ರು ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದ್ದು, ಗೃಹ ಮಂತ್ರಿಗಳು ಸಮರ್ಥರಿದ್ದಾರೆ. ತಪ್ಪಿತಸ್ಥರು ಯಾರೇ ಆದರೂ ಶಿಕ್ಷೆ ಆಗಬೇಕೆಂದು ಹೇಳಿದ್ದಾರೆ. ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ ಎಂದು ಹೇಳಿದ್ದಾರೆ.