ಹಾಸನ, ಏ 12 (DaijiworldNews/DB): ಹಾಸನ ಜಿಲ್ಲೆಯ ಬೇಲೂರು ಚನ್ನಕೇಶವ ಸ್ಮಾಮಿ ರಥೋತ್ಸವದ ವೇಳೆ ಮುಸ್ಲಿಮರಿಗೆ ಅಂಗಡಿ ಹಾಕಲು ಅವಕಾಶ ಕಲ್ಪಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯಿಸಿದ ಅವರು, ಶಿಲ್ಪಕಲೆ ನಾಡು ಎಂದೇ ಪ್ರಸಿದ್ಧಿ ಪಡೆದ ಹಾಸನ ಜಿಲ್ಲೆಯಲ್ಲಿ ಬೇಲೂರು ಚನ್ನಕೇಶವ ಸ್ಮಾಮಿ ರಥೋತ್ಸವ ಬುಧವಾರ ನಡೆಯಲಿದೆ. ಜಾತ್ರೆ ವೇಳೆ ಮುಸ್ಲಿಮರ ಅಂಗಡಿಗೆ ನಿರ್ಬಂಧ ಹಾಕುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಆದರೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲಾಗುವುದು ಎಂದರು.
ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಲು ಖುದ್ದು ರೇವಣ್ಣ ಅವರಿಗೆ ಹೇಳಲಾಗಿದೆ. ಇಲ್ಲಿಯೂ ಸೇರಿದಂತೆ ಎಲ್ಲಾ ಕಡೆ ಮುಸ್ಲಿಮರಿಗೆ ವ್ಯಾಪಾರ ನಡೆಸಲು ಅವಕಾಶ ನೀಡುವ ನಿಟ್ಟಿನಲ್ಲಿ ಹೋರಾಟ ಮಾಡುತ್ತೇನೆ ಎಂದು ಅವರು ಇದೇ ವೇಳೆ ತಿಳಿಸಿದರು.