ಮೈಸೂರು, ಏ 12 (DaijiworldNNews/HR): ನನ್ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪನವರೇ ಕಾರಣ ಎಂದು ವಾಟ್ಸಪ್ ಮೂಲಕ ಮೆಸೇಜ್ ಕಳಿಸಿ ಗುತ್ತಿಗೆದಾರ ಸಂತೋಷ್ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಕುರಿತು ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ನನಗೆ ವಿಷಯವೇ ಗೊತ್ತಿಲ್ಲದೇ ಏನು ಹೇಳಲಿ? ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಈಗ ಗೊತ್ತಾಗಿದೆ. ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದರು.
ಇನ್ನು ಸಂತೋಷ್ ಅವರು ನನ್ನ ಮೇಲೆ ಆರೋಪ ಮಾಡಿದ್ದರು. ನಾನು ಸಂತೋಷ್ ವಿರುದ್ಧ ಕೇಸ್ ಹಾಕಿದ್ದೆ. ಆದರೆ ಈಗ ಅವರೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಿದ್ದಾರೆ.
ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಶೇ.40ರಷ್ಟು ಗುತ್ತಿಗೆಗಳಲ್ಲಿ ಕಮೀಷನ್ ಕೇಳುತ್ತಿದ್ದಾರೆ. ಈ ಬಗ್ಗೆ ಸಚಿವ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಕೇಂದ್ರದ ವರಿಷ್ಠರಿಗೂ ದೂರನ್ನು ಗುತ್ತಿಗೆದಾರ ಸಂತೋಷ್ ಮಾಡಿದ್ದರು. ಇದೀಗ ಅವರು ನನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ ಎನ್ನುವಂತ ಡೆತ್ ನೋಟ್ ವಾಟ್ಸಾಪ್ ಮಾಡಿ, ನಾಪತ್ತೆಯಾಗಿದ್ದ ಅವರು ಉಡುಪಿಯ ಲಾಡ್ಜಿಂಗ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.