ಶಿವಮೊಗ್ಗ, ಏ 14 (DaijiworldNews/DB): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಭಾರೀ ಆರೋಪ-ಪ್ರತ್ಯಾರೋಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಚಿವ ಕೆ. ಎಸ್. ಈಶ್ವರಪ್ಪ ಘೋಷಿಸಿದ್ದಾರೆ.
ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿ ಗುರುವಾರ ಸಂಜೆ ಮಾತನಾಡಿದ ಅವರು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಘೋಷಣೆ ಮಾಡಿದರು. ನಾಳೆ ಸಂಜೆ ಮುಖ್ಯಮಂತ್ರಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ತಿಳಿಸಿದರು.
ಯಾವುದೇ ಕಾರಣಕ್ಕೆ ರಾಜೀನಾಮೆ ನೀಡಲಾರೆ ಎಂದು ಬುಧವಾರವಷ್ಟೇ ಹೇಳಿಕೊಂಡಿದ್ದರು. ಇದೀಗ ವರಿಷ್ಠರ ಸೂಚನೆ ಮೇರೆಗೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.