ಬೆಂಗಳೂರು, ಏ 15 (DaijiworldNews/HR): ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿರುವ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ಅಹೋರಾತ್ರಿ ಧರಣಿ ಕೈಗೊಂಡಿದೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ವಿರುದ್ಧ ಹೊಸದಾಗಿ ಎಫ್ಐಆರ್ ಹಾಕಬೇಕು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ಮಾಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಈ ಕುರಿತು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಭ್ರಷ್ಟಾಚಾರದಿಂದ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದು, ಭ್ರಷ್ಟಾಚಾರ ಆರೋಪದಡಿ ಈಶ್ವರಪ್ಪ ಮೇಲೆ ಕೇಸ್ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.