ಚಿಕ್ಕಬಳ್ಳಾಪುರ, ಏ 15 (DaijiworldNews/HR): ಪ್ರಜಾ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹಾಗೂ ಸಿಪಿಎಂ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ (73) ಶುಕ್ರವಾರ ನಿಧನರಾಗಿದ್ದಾರೆ.
ಶ್ರೀರಾಮರೆಡ್ಡಿ ಅವರು 1999 ಮತ್ತು 2004ರಲ್ಲಿ ಬಾಗೇಪಲ್ಲಿ ಕ್ಷೇತ್ರದಿಂದ ಆಯ್ಕೆ ಆಗಿದ್ದು, ರಾಜ್ಯ ಸಿಪಿಎಂ ಕಾರ್ಯದರ್ಶಿ ಆಗಿಯೂ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ರೈತ ಮತ್ತು ಕಾರ್ಮಿಕ ಹೋರಾಟಗಳನ್ನು ಕಟ್ಟುವಲ್ಲಿ ಮಂಚೂಣಿಯಲ್ಲಿ ಇದ್ದರು.
ಇನ್ನು ಶ್ರೀರಾಮರೆಡ್ಡಿ ಅವರಿಗೆ ಕಳೆದ ವರ್ಷದ ಮೇನಲ್ಲಿ ಕೊರೊನಾ ಸೋಂಕು ತಗುಲಿದ್ದು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು.