ಶಿವಮೊಗ್ಗ, ಏ 15 (DaijiworldNews/SM): ಅಗ್ನಿ ಪರೀಕ್ಷೆಯನ್ನು ಎದುರಿಸಿದ್ದು, ನನ್ನ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ. ಶೀಘ್ರವೇ ಆರೋಪ ಮುಕ್ತವಾಗಿ ಹೊರಬರುತ್ತೇನೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನನ್ನ ಬೆಂಬಲಿಗರು ನಾನು ಆರೋಪ ಮುಕ್ತರಗಿ ಬರುವಂತೆ ಕಾಯುತ್ತಿದ್ದಾರೆ. ನನ್ನ ರಾಜೀನಾಮೆಯಿಂದ ನನ್ನ ಅನುಯಾಯಿಗಳಿಗೆ ಬಹಳ ನೋವಾಗಿದೆ. ಸದ್ಯ ಅವರನ್ನು ಮನವರಿಕೆ ಮಾಡಿಕೊಂಡಿದ್ದೇನೆ. ಕಾರ್ಯಕರ್ತರು, ಹಿರಿಯರ ಆಶೀರ್ವಾದಗಳಿಂದ ಶೀಘ್ರದಲ್ಲೇ ಆರೋಪ ಮುಕ್ತನಾಗುವುದೆಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಎಲ್ಲಾ ಮಂತ್ರಿಗಳು, ಬಿಜೆಪಿ ಶಾಸಕರು ನನ್ನ ಮೇಲೆ ತೋರಿಸುತ್ತಿರುವ ಪ್ರೀತಿಯಿಂದ ಭಾವುಕನಾಗಿದ್ದೇನೆ ಎಂದರು.