ಬೆಂಗಳೂರು, ಏ 15 (DaijiworldNews/SM): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ನೇರ ಆರೋಪ ಎದುರಿಸುತ್ತಿರುವ ಈಶ್ವರಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಸಲ್ಲಿಸಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಹಾಗೂ ವಿವಿಧ ಆಯಾಮಗಳಲ್ಲಿ ವಿವಿಧ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿತ್ತು. ಈ ನಡುವೆಯೇ ಈಶ್ವರಪ್ಪ ರಾಜೀನಾಮೆಗೆ ತೀವ್ರ ಒತ್ತಾಯ ಕೇಳಿಬಂದಿತ್ತು. ಕಡೆಗೂ ನಿನ್ನೆ ಸಂಜೆ ರಾಜೀನಾಮೆಯ ನಿರ್ಧಾರಕ್ಕೆ ಈಶ್ವರಪ್ಪ ಬಂದಿದ್ದರು. ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಈಶ್ವರಪ್ಪ ರಾಜೀನಾಮೆ ಸಲ್ಲಿಸಿದ್ದಾರೆ.