ಶಿವಮೊಗ್ಗ, ಏ 16 (DaijiworldNews/HR): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯೋ, ಕೊಲೆಯೋ ಎಂಬ ಅನುಮಾನ ವ್ಯಕ್ತವಾಗಿದ್ದು, ಸಂತೋಷ್ ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಧಿಸಿದಂತೆ ನನ್ನ ವಿರುದ್ಧ ಷಡ್ಯಂತ್ರ ನಡೆದಿದ್ದು, ಸಂತೋಷ್ ಅವರನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಯಾರಿದ್ದಾರೆಂಬುದು ಹೊರಗೆ ಬರಬೇಕು ಎಂದಿದ್ದಾರೆ.
ಇನ್ನ್ನು ನಾನು ತಪ್ಪು ಮಾಡಿದ್ದರೆ ನನಗೆ ಶಿಕ್ಷೆ ಆಗಲಿ, ನಾನು ನಿರ್ದೋಷಿಯಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ. ನನ್ನ ಬಂಧನ ಬಗ್ಗೆ ಕೇಳುವವರು ಮನಃಸಾಕ್ಷಿಯನ್ನು ಕೇಳಿಕೊಳ್ಳಲಿ, ಈ ಹಿಂದೆ ಕೆ.ಜೆ. ಜಾರ್ಜ್ ಅವರನ್ನು ಬಂಧಿಸಿರಲಿಲ್ಲ. ಈಗ ನನ್ನ ಬಂಧನಕ್ಕೆ ಏಕೆ ಒತ್ತಾಯಿಸುತ್ತಿದ್ದರೆ ಎಂದು ವಾಗ್ಡಳಿ ನಡೆಸಿದ್ದಾರೆ.