ವಿಜಯಪುರ, ಏ 16 (DaijiworldNews/HR): ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್ ಈಶ್ವರಪ್ಪನವರು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಅವರನ್ನು ಬಂಧಿಸೋ ಅವಶ್ಯಕತೆ ಇಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ನಾನು ಕೂಡ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿದ್ದೆ.ಅದರಂತೆ ನೈತಿಕತೆ ಹೊಣೆಹೊತ್ತು ರಾಜೀನಾಮೆ ನೀಡಿದ್ದಾರೆ. ಈಗ ಅವರನ್ನು ಯಾಕೆ ಬಂಧಿಸಬೇಕು ಎಂದು ಪ್ರಶ್ನಿಸಿದ್ದಾರೆ.
ಇನ್ನು ಈಶ್ವರಪ್ಪ ಅಧಿಕಾರದಲ್ಲಿ ಇದ್ದರೇ ತನಿಖೆಗೆ ಅಡ್ಡಿಯಾಗಬಹುದು ಎನ್ನುವ ಕಾರಣಕ್ಕೆ ರಾಜೀನಾಮೆ ಕೇಳೋದು ಸರಿ. ಆದರೆ ಅವರನ್ನು ಬಂಧಿಸೋದು, ಬಿಡೋದು ತನಿಖೆ ಮಾಡುತ್ತಿರೋರಿಗೆ ಬಿಟ್ಟ ವಿಚಾರವಾಗಿದೆ ಎಂದು ಹೇಳುವ ಮೂಲಕ ಈಶ್ವರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ.