ಬೆಂಗಳೂರು, ಏ 16 (DaijiworldNews/HR): ಭ್ರಷ್ಟಾಚಾರದ ವಿರುದ್ಧ ಪ್ರತಿಭಟಿಸುತ್ತಿರುವ ಕಾಂಗ್ರೆಸ್ಸಿನವರ ಬೀರುಗಳಲ್ಲಿ ಭ್ರಷ್ಟಾಚಾರದ ಅಸ್ಥಿಪಂಜರಗಳು ಎಷ್ಟಿವೆ ಎಂದು ಮೊದಲು ಲೆಕ್ಕಹಾಕಿಕೊಳ್ಳಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಪವಿತ್ರ ಹಸ್ತದವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಯಾತ್ರೆ ಹೊರಟಿದ್ದಾರೆ. ಇದ್ಯಾವುದರಿಂದಲೂ ಪ್ರಯೋಜನವಾಗುವುದಿಲ್ಲ ಎಂದು ಜನರಿಗೆ ಗೊತ್ತಿದೆ. ಇಂಥ ಹಲವಾರು ಸಲಗೆಹಾರರನ್ನು ಪಡೆದು ನಿರೂಪಣೆ ಸೃಷ್ಟಿಸಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಕರ್ನಾಟಕದ ಜನತೆ ಕಾಂಗ್ರೆಸ್ ಅನ್ನು ಬಹಳ ವರ್ಷಗಳಿಂದ ನೋಡಿದ್ದಾರೆ. ಯಾವ ಯಾವ ಹಗರಣಗಳಾಗಿವೆ ಎಂದು ಅವರಿಗೆ ತಿಳಿದಿದೆ. ನಾವೂ ಜನರ ಮುಂದೆ ಅವರು ಮಾಡಿರುವ ಹಗರಣಗಳನ್ನು ಇಡಬೇಕಾದ ಕಾಲ ಬರುತ್ತಿದೆ ಎಂದು ಹೇಳಿದ್ದಾರೆ.