ನವದೆಹಲಿ, ಏ 17 (DaijiworldNews/HR): ಕೊರೊನಾ ಸಮಯದಲ್ಲಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ 40 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಭಾರತದಲ್ಲಿ ಕೊರೊನಾದಿಂದ 40 ಲಕ್ಷ ಜನರು ಸಾವನ್ನಪ್ಪಿದ್ದಾರೆ ಎಂಬ ಹೇಳಿಕೆ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಮೋದಿ ಜೀ ಸತ್ಯವನ್ನು ಮಾತನಾಡುವುದಿಲ್ಲ, ಅಥವಾ ಇತರರನ್ನು ಮಾತನಾಡಲು ಬಿಡುವುದಿಲ್ಲ. ಆಮ್ಲಜನಕದ ಕೊರತೆಯಿಂದ ಯಾರೂ ಸತ್ತಿಲ್ಲ ಎಂದು ಅವರು ಇನ್ನೂ ಸುಳ್ಳು ಹೇಳುತ್ತಾರೆ!' ಎಂದು ಆರೋಪಿಸಿದ್ದಾರೆ.
ಇನ್ನು ನಾನು ಮೊದಲೇ ಹೇಳಿದ್ದೆ, ಕೋವಿಡ್ ಸಮಯದಲ್ಲಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ, ಐದು ಲಕ್ಷ ಅಲ್ಲ, ಅದಕ್ಕೂ ಹೆಚ್ಚು ಅಮಾಯಕ ಜನರು ಸಾಯಬಹುದು ಎಂದು. ಆದರೆ 40 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ. ನಿಮ್ಮ ಜವಾಬ್ದಾರಿಯನ್ನು ಪೂರೈಸಿ, ಪ್ರತಿ ಕೊರೊನಾ ಸಂತ್ರಸ್ತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರವನ್ನು ನೀಡಿ ಎಂದು ಒತ್ತಾಯಿಸಿದ್ದಾರೆ.