ಬೆಂಗಳೂರು, ಏ 17 (DaijiworldNews/HR): ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದಿರುವ ಗಲಾಟೆಗಳ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಬೇಕು. ಪ್ರಚೋದನಾತ್ಮಕ ಪೋಸ್ಟ್ ಮಾಡಿದವನ ಹಿಂದೆ ಯಾರು ಇದ್ದಾರೆ ಎನ್ನುವುದನ್ನು ಪತ್ತೆ ಹಚ್ಚಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಒಂದಲ್ಲ ಒಂದು ಘಟನೆ ನಡೆಯುತ್ತಲೇ ಇದ್ದು, ಹುಬ್ಬಳ್ಳಿ ನಗರದಲ್ಲಿ 15 -20 ವರ್ಷ ಕಾಲ ನೆತ್ತರ ಹೋಕುಳಿ ಆಡುತ್ತಿದ್ದರು. 1994ರಲ್ಲಿ ದೇವೇಗೌಡರು ಅದನ್ನು ತಹಬದಿಗೆ ತಂದಿದ್ದರು. ಆದರೆ ನಿನ್ನೆ ರಾತ್ರಿ ಮತ್ತೆ ಬೆಂಕಿ ಹಚ್ಚುವ ಕೆಲಸ ಆಗಿದೆ ಎಂದರು.
ಇನ್ನು ಕೆಲ ತಿಳಿಗೇಡಿಗಳು ಮುಸ್ಲಿಂ ಜನಾಂಗವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದು, ಇದಕ್ಕೆ ಯಾರೂ ಬಲಿಯಾಗಬೇಡಿ ಎಂದು ಮುಸ್ಲಿಂ ಬಾಂದವರಿಗೆ ಹೇಳಲು ಬಯಸುತ್ತೇನೆ. ಹೀಗೆ ಬೆಂಕಿ ಹಚ್ಚೋದ್ರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಹೇಳಿದ್ದಾರೆ.