ನವದೆಹಲಿ, ಏ 18 (DaijiworldNews/MS): ಕಳೆದ ಹಲವು ದಿನಗಳಿಂದ ಇಳಿಕೆಯ ಹಾದಿಯಲ್ಲಿದ್ದ ಕೋವಿಡ್ ಪ್ರಕರಣ ಮತ್ತೆ ಏರಿಕೆಯತ್ತ ಸಾಗಿದ್ದು, 24 ಗಂಟೆಗಳಲ್ಲಿ ದೇಶದಲ್ಲಿ 2,183 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಪ್ರಕರಣಗಳ ಸಂಖ್ಯೆಯಲ್ಲಿ ಸುಮಾರು ಶೇಕಡಾ 90ರಷ್ಟು ಹೆಚ್ಚಳವು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ.
ಭಾನುವಾರ 1,150 ಕೋವಿಡ್ ಪ್ರಕರಣಗಳು ದಾಖಲಾಗಿದ್ದವು. ಇನ್ನು, ದೇಶದಲ್ಲಿ ಒಂದೇ ದಿನ 214 ಮಂದಿ ಕೋವಿಡ್ ಸೋಂಕಿತರು ಅಸುನೀಗಿದ್ದಾರೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,44,280ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,21,967ಕ್ಕೆ ಏರಿಕೆಯಾಗಿದೆ.
ಸದ್ಯ, ದೇಶದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 11,542 ರಷ್ಟಿದ್ದು, 24 ಗಂಟೆಗಳಲ್ಲಿ 1,985 ಮಂದಿ ಚೇತರಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,86,51,53,593 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.