ಮುಂಬೈ, ಏ 18 (DaijiworldNews/HR): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಅವರಿಗೆ ವಿಧಿಸಲಾಗಿರುವ ನ್ಯಾಯಾಂಗ ಬಂಧನದ ಅವಧಿಯನ್ನು ವಿಶೇಷ ನ್ಯಾಯಾಲಯ ಏಪ್ರಿಲ್ 22ರವರೆಗೆ ವಿಸ್ತರಣೆ ಮಾಡಿದೆ ಎಂದು ತಿಳಿದು ಬಂದಿದೆ.
ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಲಾಗಿರುವ ಅರ್ಜಿಯು ಏಪ್ರಿಲ್ 22ಕ್ಕೆ ವಿಚಾರಣೆಗೆ ಬರುವ ನಿರೀಕ್ಷೆ ಇದೆ ಎಂದು ಮಲಿಕ್ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದು, ಬಳಿಕ ನ್ಯಾಯಾಧೀಶರು ಮಲಿಕ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಇನ್ನು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನವಾಬ್ ಮಲಿಕ್ ಅವರನ್ನು ಫೆಬ್ರುವರಿ 23ರಂದು ಜಾರಿ ನಿರ್ದೇಶನಾಲಯವು (ಇ.ಡಿ) ಬಂಧಿಸಿತ್ತು.