ಬೆಂಗಳೂರು, ಏ 18 (DaijiworldNews/SM) : ದಿಂಗಾಲೇಶ್ವರ ಸ್ವಾಮೀಜಿಗಳು ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್ ಕಮಿಷನ್ ಕೊಟ್ಟಿದ್ದಾರೆ ಎಂದು ದಾಖಲೆ ನೀಡಲಿ, ಆ ಬಗ್ಗೆ ಸಂಪೂರ್ಣ ತನಿಖೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ದಿಂಗಾಲೇಶ್ವರ ಸ್ವಾಮೀಜಿಯ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
"ಮಠಗಳಿಗೆ ಅನುದಾನ ಬಿಡುಗಡೆಗೂ ಶೇ. ೩೦ರಷ್ಟು ಕಮಿಷನ್ ನೀಡಬೇಕು" ಎಂದು ಗಂಭೀರ ಆರೋಪವನ್ನು ದಿಂಗಾಲೇಶ್ವರ ಸ್ವಾಮೀಜಿಗಳು ಮಾಡಿದ್ದರು. ಈ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, "ದಿಂಗಾಲೇಶ್ವರ ಸ್ವಾಮೀಜಿಗಳು ಅತ್ಯಂತ ಉತ್ತಮ ಸ್ವಾಮೀಜಿ, ದೊಡ್ಡ ತಪಸ್ವಿಗಳಾಗಿದ್ದಾರೆ. ಸ್ವಾಮೀಜಿಗಳಿಗೆ ಒಳ್ಳೆಯ ಹಿನ್ನಲೆ ಇದೆ. ಎಲ್ಲಿ, ಯಾರಿಗೆ, ಎಷ್ಟು ಪರ್ಸೆಂಟ್ ಕೊಟ್ಟಿದ್ದಾರೆ ಎಂದು ದಾಖಲೆ ನೀಡಲಿ, ನಾವು ಸಂಪೂರ್ಣವಾಗಿ ತನಿಖೆ ಮಾಡುತ್ತೇವೆ ಎಂದು ಹೇಳಿದರು.