ಹುಬ್ಬಳ್ಳಿ, ಏ 19 (DaijiworldNews/HR): ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧಿಸಿದಂತೆ ಈವರೆಗೆ ಒಟ್ಟು 12 ಪ್ರಕರಣಗಳು ದಾಖಲಾಗಿದ್ದು, ಒಟ್ಟು 104 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಹಳೇ ಹುಬ್ಬಳ್ಳಿಯಲ್ಲಿ ಪ್ರಚೋಧನಕಾರಿ ವಾಟ್ಸಪ್ ಸ್ಟೇಟಸ್ ನಿಂದ ಶನಿವಾರದಂದು ಗಲಾಟೆ ನಡೆದಿದ್ದು, ಗಲಭೆ ವೇಳೆ ಕೊಲೆ ಯತ್ನ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಸೇರಿ ಹಲವು ಪ್ರಕರಣಗಳು ದಾಖಲಾಗಿದ್ದು, ತಲೆಮರೆಸಿಕೊಂಡಿರವ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಈವರೆಗೆ 12 ಪ್ರಕರಣಗಳು ದಾಖಲಾಗಿದ್ದು, ಸೋಮವಾರ ಮತ್ತೆ 15 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟು 104 ಆರೋಪಿಗಳ ಬಂಧನವಾಗಿದೆ.
ಬಂಧಿತ ಆರೋಪಿಗಳನ್ನು ವಿಡಿಯೋ ಕಾನ್ಫೆರೆನ್ಸ್ ಮೂಲಕ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.