ಚಿಕ್ಕಮಗಳೂರು, ಏ 19 (DaijiworldNews/HR): ನಾನು ಯಾವುದರಲ್ಲೂ ಸಾಫ್ಟ್ ಕಾರ್ನರ್ ತೋರಿಲ್ಲ. ಖಡಕ್ ಎಂದರೆ ಏನು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಪಕ್ಷಗಳಿಗೆ ಪ್ರಶ್ನಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಘಟನೆಯ ಬಗ್ಗೆ ಕ್ರಮ ತೆಗೆದುಕೊಂಡಿದ್ದೇವೆ. ಶಿವಮೊಗ್ಗ ಕೇಸಲ್ಲೂ ಕ್ರಮ ತೆಗೆದುಕೊಂಡಿದ್ದೇವೆ. ಹಣ್ಣಿನ ಅಂಗಡಿ ವಿಚಾರದಲ್ಲೂ ಕ್ರಮ ತೆಗೆದುಕೊಂಡಿದ್ದೇವೆ. ಯಾವುದೂ ವಿಳಂಬ ಮಾಡಿಲ್ಲ. ಸಂತೋಷ್ ಪಾಟೀಲ್ ಕೇಸ್ ತಕ್ಷಣವೇ ಎಫ್ಐಆರ್ ಮಾಡಿ ಕೆಲಸ ಮಾಡುತ್ತಿದ್ದೇವೆ. ಇದಕ್ಕಿಂತ ಬೇರೆ ಇನೇನು ಬೇಕು ನಿಮಗೆ ಎಂದು ಪ್ರಶ್ನಿಸಿದ್ದಾರೆ.
ಇನ್ನು ಯಾವ ಅಮಾಯಕನನ್ನು ಕೂಡ ಹುಬ್ಬಳ್ಳಿ ಪ್ರಕರಣದಲ್ಲಿ ಬಂಧಿಸಿಲ್ಲ. ಸಾಕ್ಷಿಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ವಿರೋಧಪಕ್ಷಗಳು ಟೀಕೆ ಮಾಡುವುದು ಸಾಮಾನ್ಯ. ಆದರೆ ಜನರು ಏನು ಹೇಳುತ್ತಾರೆ ಮುಖ್ಯವಾಗುತ್ತದೆ ಎಂದು ಹೇಳಿದ್ದಾರೆ.