ಬೆಂಗಳೂರು, ಏ 19 (DaijiworldNews/SM): ದ್ವಿತೀಯ ಪಿಯುಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯಗೊಳಿಸಲಾಗಿದ್ದು, ಹಿಜಾಬ್ ಸೇರಿ ಯಾವುದೇ ಧಾರ್ಮಿಕ ವಸ್ತ್ರಕ್ಕೆ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿವೆ. ಈ ಸಂದರ್ಭದಲ್ಲಿ ಸಮವಸ್ತ್ರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕೆಂದು ಅವರು ತಿಳಿಸಿದ್ದಾರೆ.
ಬೆಳಗ್ಗೆ 10.15ರಿಂದ ಪರೀಕ್ಷೆಗಳು ಆರಂಭಗೊಳ್ಳಲಿದ್ದು, ಮಧ್ಯಾಹ್ನ 1.30ರ ತನಕ ಪರೀಕ್ಷೆಗಳು ನಡೆಯಲಿವೆ. ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತದೆ ಎಂದು ಶಿಕ್ಷಣ ಸಚಿವ ನಾಗೇಶ್ ತಿಳಿಸಿದ್ದಾರೆ.