ಲಖನೌ, ಏ 20 (DaijiworldNews/HR): ಸಮಾಜವಾದಿ ಪಕ್ಷದ (ಎಸ್ಪಿ) ಮುಖಂಡರೊಬ್ಬರನ್ನು ಅಮಾನುಷವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ಪಿಜಿಐ ಪೊಲೀಸ್ ಠಾಣಾ ವ್ಯಾಪ್ತಿಯ ರೇವ್ತಾಪುರ ಪ್ರದೇಶದಲ್ಲಿ ನಡೆದಿದೆ.
ಮೃತಪಟ್ಟ ಯುವಕನ್ನನು ರೋಹಿತ್(26) ಎಂದು ಗುರುತಿಸಲಾಗಿದ್ದು, ಆತನ ಮೇಲೆ ಸಚಿನ್ ಮತ್ತು ಆತನ ಸಹಚರರು ಹಲ್ಲೆ ನಡೆಸಿದ್ದಾರೆ.
ರೋಹಿತ್ಗೆ ಕಬ್ಬಿಣದ ರಾಡ್ಗಳು, ಹರಿತವಾದ ಆಯುಧಗಳು ಮತ್ತು ಲಾಠಿಗಳಿಂದ ತೀವ್ರವಾಗಿ ಥಳಿಸಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಇನ್ನು ಮೃತರ ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಸಚಿನ್ ಮತ್ತು ಐವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.