ಹುಬ್ಬಳ್ಳಿ, ಏ 21 (DaijiworldNews/MS): ಕಳೆದ ವಾರ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರದ ಪ್ರಮುಖ ಆರೋಪಿ ಎಂದು ಬಿಂಬಿಸಲಾಗಿರುವ ಎಂಐಎಂ ಮುಖಂಡ ಮಹಮ್ಮದ್ ಆರೀಫ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್ ಹಾಕಿದ ನಂತರ ನಡೆದ ಬೆಳವಣಿಗೆಯಲ್ಲಿ ಪೊಲೀಸ್ ವಾಹನ, ಠಾಣೆ, ದೇವಸ್ಥಾನಗಳ ಮೇಲೆ ಕಲ್ಲು ತೂರಾಟ ನಡೆಸಿ, ಗಲಭೆ ನಡೆಸಲಾಗಿತ್ತು. ಹಳೇ ಹುಬ್ಬಳ್ಳಿ, ರಣಾಂಗಣವಾಗಿ ಏರ್ಪಟ್ಟಿತ್ತು. ಈ ಪ್ರಕರಣದಲ್ಲಿ ಈಗಾಗಲೇ 100ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರ ಬಂಧೋಬಸ್ತ್ ಹಾಗೂ ಏಪ್ರಿಲ್ 28ರವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಇದೀಗ ಹುಬ್ಬಳ್ಳಿ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ಎಂದು ಹೇಳಲಾಗುತ್ತಿದ್ದಂತ ಎಂಐಎಂ ಮುಖಂಡ ಮಹಮ್ಮದ್ ಆರೀಫ್ ಎಂಬಾತನನ್ನು ಬಂಧಿಸಲಾಗಿದೆ. ಇನ್ನೊರ್ವ ಆರೋಪಿಯಾಗಿರುವಂತ ವಸೀಂ ಎಂಬಾತ ಇನ್ನೂ ನಾಪತ್ತೆಯಾಗಿದ್ದು, ಈತನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ.