ನವದೆಹಲಿ, ಏ 21 (DaijiworldNews/DB): ಅಪರಿಚಿತ ದುಷ್ಕರ್ಮಿಗಳು ಭಾರತೀಯ ಜನತಾ ಪಕ್ಷದ ನಾಯಕ ಜೀತು ಚೌಧರಿ ಅವರನ್ನು ಗುಂಡಿಟ್ಟು ಹತ್ಯೆಗೈದಿರುವ ಘಟನೆ ದೆಹಲಿಯ ಮಯೂರ್ ವಿಹಾರ್ ಪ್ರದೇಶದಲ್ಲಿ ಬುಧವಾರ ನಡೆದಿದೆ.
ಜೀತು ಚೌಧರಿ ಅವರ ಮನೆಯ ಮುಂಭಾಗದಲ್ಲೇ ಈ ಘಟನೆ ನಡೆದಿದೆ. ಗಸ್ತು ತಿರುಗುತ್ತಿದ್ದ ಪೊಲೀಸರಿಗೆ ರಕ್ತದ ಮಡುವಿನಲ್ಲಿ ವ್ಯಕ್ತಿಯೊಬ್ಬರು ಬಿದ್ದಿರುವುದು ಕಾಣಿಸಿದ್ದು, ನೋಡಿದಾಗ ಜೀತು ಚೌಧರಿ ಅವರೆಂದು ಗೊತ್ತಾಗಿದೆ. ಗುಂಡಿನ ದಾಳಿಯಿಂದ ತೀವ್ರ ಗಾಯಗೊಂಡ ಅವರನ್ನು ತತ್ಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಘಟನೆ ಕುರಿತಂತೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಪ್ರತ್ಯಕ್ಷದರ್ಶಿಗಳ ಸಾಕ್ಷಿ ಹಾಗೂ ಸಿಸಿಟಿವಿ ದಾಖಲೆಗಳ ಆಧಾರದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
.