ನವದೆಹಲಿ, ಏ 21 (DaijiworldNews/MS): ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಬಂಧನವನ್ನು ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೊಂದು " ಪ್ರಜಾಪ್ರಭುತ್ವ ವಿರೋಧಿ" ಮತ್ತು "ಅಸಂವಿಧಾನಿಕ" ಕ್ರಮ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಬುಧವಾರ ರಾತ್ರಿ ಗುಜರಾತ್ನ ಪಾಲನ್ಪುರ ಪಟ್ಟಣದಿಂದ ಅಸ್ಸಾಂ ಪೊಲೀಸರು ಬಂಧಿಸಿ ಮುಂಜಾನೆ ವಿಮಾನದ ಮೂಲಕ ಅಸ್ಸಾಂಗೆ ಕರೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇವಾನಿ ಬಂಧನವನ್ನು ಟೀಕಿಸಿದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಭಿನ್ನಾಭಿಪ್ರಾಯವನ್ನು ಹೊಸಕಿಹಾಕುವ ಯತ್ನಿಸುವ ಮೂಲಕ ಸತ್ಯವನ್ನು ಎಂದು ಅಳಿಸಿ ಹಾಕಲು ಸಾಧ್ಯವಿಲ್ಲ ಇದು ಜನಪ್ರತಿನಿಧಿಯಾಗಿ ಆಯ್ಕೆ ಮಾಡಿದ ಜನರಿಗೆ ಮಾಡಿದ ಅವಮಾನ ಎಂದು ರಾಹುಲ್ ಹೇಳಿದ್ದಾರೆ.
"ಮೋದಿ ಜೀ, ನೀವು ರಾಜ್ಯ ಸರ್ಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಪ್ರಯತ್ನಿಸಬಹುದು. ಆದರೆ ನೀವು ಎಂದಿಗೂ ಸತ್ಯವನ್ನು ಬಂಧಿಸಲು ಸಾಧ್ಯವಿಲ್ಲ" ಎಂದು ಟ್ವೀಟ್ ಮಾಡಿ ರಾಹುಲ್ ಗಾಂಧಿ ಟೀಕಿಸಿದ್ದಾರೆ
ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಬಂಧಿಸಿರುವ ಪ್ರಜಾಸತ್ತಾತ್ಮಕ ವಿಧಾನ ಸಂವಿಧಾನ ವಿರೋಧಿ ಕ್ರಮವಾಗಿದೆ ಮತ್ತು ಅವರನ್ನು ಸಾರ್ವಜನಿಕ ಪ್ರತಿನಿಧಿಯಾಗಿ ಆಯ್ಕೆ ಮಾಡಿದ ಜನರಿಗೆ ಅವಮಾನವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಲಿದ್ದಾರೆ" ಎಂದು ಕಾಂಗ್ರೆಸ್ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.