ಹುಬ್ಬಳ್ಳಿ, ಏ 21 (DaijiworldNews/MS): ಮುಸ್ಲಿಮರ ಮನಸ್ಥಿತಿ ಬದಲಾಗಬೇಕಾಗಿದ್ದು, ಮೊದಲು ಕಲ್ಲು ತೂರಾಟ ಮಾಡುವ ಸಂಸ್ಕೃತಿ ಬಿಡಬೇಕು. ಇಲ್ಲದಿದ್ದರೆ ಕಲ್ಲು ತೂರುವವರ ಬಳಿಗೆ ಬುಲ್ಡೋಜರ್ ಬರಲಿದೆ ಎಂದು ಸಂಸದ ಪ್ರತಾಪ್ ಸಿಂಹ ಎಚ್ಚರಿಸಿದ್ದಾರೆ.
ಹುಬ್ಬಳಿಯಲ್ಲಿಮಾಧ್ಯಮದೊಂದಿಗೆ ಮಾತನಾಡಿದ ಅವರು, ಇಲ್ಲಿನ ಮುಸ್ಲಿಮರನ್ನು ಮೆಕ್ಕಾ ಮದೀನಾದಿಂದ ಕರೆತಂದಿಲ್ಲ ನಮ್ಮ ರಕ್ತ ನಿಮ್ಮಲ್ಲಿ ಹರಿಯುತ್ತಿದೆ. ನಿಮ್ಮ ಕಲ್ಲು ತೂರುವ ಸಂಸ್ಕೃತಿ ಬಿಡದಿದ್ದರೆ ಉತ್ತರ ಪ್ರದೇಶದಲ್ಲಿ ಇರುವಂತೆ ಇಲ್ಲಿಯೂ ಆಗಲಿದ್ದು ಅಂತವರ ಬಳಿಗೆ ಬುಲ್ಡೋಜರ್ ಬರಲಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮುಸ್ಲಿಮರ ಮೆರವಣಿಗೆ ಮೇಲೆ ಹಿಂದೂಗಳು ಯಾವತ್ತೂ ಕೂಡಾ ಕೂಡ ಕಲ್ಲು ತೂರಾಟ ನಡೆಸಿಲ್ಲ. ಕಲ್ಲು ಹೊಡೆಯುವುದು ಮುಸ್ಲಿಮರ ಸಂಸ್ಕೃತಿಯಾಗಿದೆ. ಹುಬ್ಬಳ್ಳಿ, ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಸೇರಿದಂತೆ ರಾಜ್ಯದ ವಿವಿಧೆಡೆ ಸಂಭವಿಸಿದ ಗಲಭೆಗಳಲ್ಲಿ ಮುಸ್ಲಿಮರ ಮನಸ್ಥಿತಿ ಹೇಗಿದೆ ಎಂದು ಜಗಜ್ಜಾಹೀರವಾಗಿದೆ. ಹೀಗಾಗಿ ಈ ವಿಚಾರದಲ್ಲಿ ಮುಸ್ಲಿಮರ ಮನಸ್ಥಿತಿ ಮೊದಲು ಬದಲಾಗಬೇಕು ಎಂದಿದ್ದಾರೆ.
ಈ ದೇಶದಲ್ಲಿ ಕ್ರಿಶ್ಚಿಯನ್, ಪಾರ್ಸಿಗಳು ಸೇರಿದಂತೆ ಯಾವುದೇ ಧರ್ಮೀಯರು ಕಲ್ಲು ತೂರಾಟ ನಡೆಸುವುದಿಲ್ಲ. ಮುಸ್ಲಿಮರು ಮಾತ್ರ ಅನ್ಯ ಧರ್ಮೀಯರ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆ. ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿ ಅಂಗಡಿ ಮುಗ್ಗಟ್ಟನ್ನು ಬಂದ್ ಮಾಡಿದ್ದರಿಂದ ಈ ಸಮಸ್ಯೆ ಆರಂಭವಾಯಿತು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ