ನವದೆಹಲಿ, ಏ 21 (DaijiworldNews/HR): ಭಯೋತ್ಪಾದನೆಯು ಮಾನವ ಹಕ್ಕುಗಳ ಉಲ್ಲಂಘನೆಯ ಅತಿದೊಡ್ಡ ರೂಪವಾಗಿದ್ದು, ಜನರ ಹಕ್ಕುಗಳನ್ನು ರಕ್ಷಿಸಲು ಈ ಬೆದರಿಕೆಯನ್ನು ಬೇರುಸಹಿತ ಕಿತ್ತುಹಾಕಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಭಯೋತ್ಪಾದನೆಗಿಂತ ಹೆಚ್ಚಿನ ಮಾನವ ಹಕ್ಕುಗಳ ಉಲ್ಲಂಘನೆ ಸಾಧ್ಯವಿಲ್ಲ ಎಂದು ನಾನು ನಂಬುತ್ತೇನೆ. ಭಯೋತ್ಪಾದನೆಯು ಮಾನವ ಹಕ್ಕುಗಳ ಉಲ್ಲಂಘನೆಯ ದೊಡ್ಡ ರೂಪವಾಗಿದೆ. ಮಾನವ ಹಕ್ಕುಗಳನ್ನು ರಕ್ಷಿಸಲು ಭಯೋತ್ಪಾದನೆಯನ್ನು ಬೇರುಸಹಿತ ಕಿತ್ತೊಗೆಯುವುದು ಸಂಪೂರ್ಣವಾಗಿ ಅವಶ್ಯಕವಾಗಿದೆ ಎಂದರು.
ಇನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣು ನೀತಿಯನ್ನು ಅಳವಡಿಸಿಕೊಂಡಿದ್ದು, ಭಾರತದಿಂದ ಬೆದರಿಕೆಯನ್ನು ಬೇರು ಸಹಿತ ಕಿತ್ತೊಗೆಯಲು ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.