ತುಮಕೂರು, ಏ 21 (DaijiworldNews/HR): ಜೆಡಿಎಸ್ ಬಗ್ಗೆ ಸಾಫ್ಟ್ ಕಾರ್ನರ್ ರೂ ಇಲ್ಲ. ಅವರ ರಾಜಕಾರಣ ಅವರು ಮಾಡುತ್ತಾರೆ ನಮ್ಮ ರಾಜಕಾರಣ ನಾವು ಮಾಡುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಬಗ್ಗೆ ಸಾಫ್ಟ್ ಇಲ್ಲ. ಕಾರ್ನರ್ ರೂ ಇಲ್ಲ. ಅವರ ರಾಜಕಾರಣ ಅವರು ಮಾಡುತ್ತಾರೆ ಎಂದರು.
ಇನ್ನು ಸಂಸದ ಹೆಚ್.ಡಿ. ದೇವೇಗೌಡರು ತಮಗೆ ಕರೆ ಮಾಡಿದ್ದರ ಬಗ್ಗೆ ಮಾತನಾಡಿದ ಅವರು, ದೇವೇಗೌಡರು ನಮ್ಮ ಹಿರಿಯರು. ನನಗೆ ಕರೆ ಮಾಡಿ ಬೆಂಗಳೂರಿಗೆ ಯಾವಾಗ ಹಿಂದಿರುಗುತ್ತೀರಿ ಎಂದು ಪ್ರಶ್ನಿಸಿದರು. ಬಂದಾಗ ಕರೆ ಮಾಡಲು ತಿಳಿಸಿದ್ದಾರೆ ಎಂದರು.