ನವದೆಹಲಿ, ಏ 21 (DaijiworldNews/HR): ದರೋಡೆಕೋರ ಅಬು ಸಲೇಂ ತನಗೆ ವಿಧಿಸಿರುವ ಜೈಲು ಶಿಕ್ಷೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರವಾಗಿ ಕೇಂದ್ರ ಗೃಹ ಸಚಿವಾಲಯ ತಳೆದಿರುವ ನಿಲುವಿಗೆ ಸುಪ್ರೀಂ ಕೋರ್ಟ್ ತಿರುಗೇಟು ನೀಡಿದ್ದು, ಕೇಂದ್ರ ಗೃಹ ಸಚಿವಾಲಯದ ನಿಲುವನ್ನು ತಿರಸ್ಕರಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಿರುವ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ, ನ್ಯಾಯಾಂಗಕ್ಕೆ ಉಪನ್ಯಾಸ ನೀಡಬೇಡಿ. ನೀವು ನಿರ್ಧರಿಸಬೇಕಾದ ಯಾವುದೇ ಪ್ರಕರಣದ ಬಗ್ಗೆ ನಿರ್ಧಾರ ಕೈಗೊಳ್ಳಲು ನಮಗೆ ಹೇಳಿದಾಗ ನಾವು ಅದನ್ನು ದಯೆಯಿಂದ ತೆಗೆದುಕೊಳ್ಳಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಎಸ್.ಕೆ.ಕೌಲ್ ಹೇಳಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳಲು ನಮಗೆ ಹೇಳಲು ಗೃಹ ಸಚಿವಾಲಯದ ಕಾರ್ಯದರ್ಶಿ ಯಾರು ಎಂದು ನ್ಯಾಯಮೂರ್ತಿ ಪ್ರಶ್ನಿಸಿದ್ದಾರೆ.
1993ರ ಬಾಂಬೆ ಸ್ಫೋಟ ಪ್ರಕರಣದಲ್ಲಿ ಅಪರಾಧಿಯಾಗಿರುವ ಅಬು ಸಲೇಂ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂ.ಎಂ.ಸುಂದ್ರೇಶ್ ಅವರು ನಡೆಸಿದ್ದಾರೆ.