ನವದೆಹಲಿ, ಏ 21 (DaijiworldNews/HR): ಪ್ರಶಾಂತ್ ಕಿಶೋರ್ ಶೀಘ್ರವೇ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗುತ್ತಿದ್ದು, ಎರಡು ದಿನಗಳ ಹಿಂದೆ ಪಕ್ಷದ ಹಿರಿಯ ನಾಯಕರ ಜೊತೆ ಪ್ರಶಾಂತ್ ಕಿಶೋರ್ ಮಹತ್ವದ ಸಭೆ ನಡೆಸಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಕಾಂಗ್ರೆಸ್ ಪಕ್ಷ ಹಲವಾರು ಬದಲಾವಣೆಗಳನ್ನು ಮಾಡುತ್ತಿದ್ದು, ಪ್ರತಾಂತ್ ಕಿಶೋರ್ ಪಕ್ಷ ಸೇರ್ಪಡೆಗೆ ಹಲವಾರು ಮುಖ್ಯಮಂತ್ರಿಗಳು ಸಹ ಒಪ್ಪಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.
ಇನ್ನು ಪಕ್ಷದ ಚುನಾವಣಾ ತಂತ್ರಗಾರರ ಜೊತೆ ಪ್ರಶಾಂತ್ ಕಿಶೋರ್ ಮಹತ್ವದ ಸಭೆ ನಡೆಸಿದ್ದು, ಪಕ್ಷದಲ್ಲಿ ಆಗಬೇಕಾದ ಬದಲಾವಣೆ ಬಗ್ಗೆ 600 ಸ್ಲೈಡ್ಗಳ ವಿವರಗಳನ್ನು ನೀಡಿದ್ದರು.