ಹುಬ್ಬಳ್ಳಿ, ಏ 22 (DaijiworldNews/MS): ವಿವಾದಾತ್ಮಕ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಆರೋಪಕ್ಕೆ ಗುರಿಯಾಗಿರುವ ಹುಬ್ಬಳ್ಳಿಯ ಅಭಿಷೇಕ್ ಹಿರೇಮಠ ಪೊಲೀಸ್ ಬಿಗಿ ಭದ್ರತೆಯಲ್ಲಿ ಇಂದು ಶುಕ್ರವಾರ ಮೊದಲ ದಿನ ದ್ವಿತೀಯ ಪಿಯುಸಿ ಪರೀಕ್ಷೆ ಹಾಜರಾಗಿದ್ದಾನೆ.
ಇಂದು ನಡೆಯುತ್ತಿರುವ ದ್ವಿತೀಯ ಪಿಯು ಪರೀಕ್ಷೆ, ಬಿಗಿ ಭದ್ರತೆಯಲ್ಲಿ ಪೊಲೀಸರು ಹುಬ್ಬಳ್ಳಿಯ ಪ್ರಿಯದರ್ಶಿನಿ ಕಾಲೋನಿ ಡಾ. ಬಿ ಆರ್ ಪಾಟೀಲ ಮಹೇಶ ಪದವಿ ಪೊರ್ವ ವಿಜ್ಞಾನ ಮಹಾವಿದ್ಯಾಲಯ ಪಿಯುಸಿ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಇಂದು ಬಿಸಿನೆಸ್ ಸ್ಟಡೀಸ್ ವಿಷಯದ ಪರೀಕ್ಷೆ ಇದ್ದು ಅಭಿಷೇಕ ಹಿರೇಮಠ ಅವರಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ.
ಅಭಿಷೇಕ್ ಹಿರೇಮಠ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಜೆ ಎಂ ಎಫ್ ಸಿ ನ್ಯಾಯಾಲಯ ಅನುಮತಿ ನೀಡಿದ್ದು, ಆದರೆ ಮಧ್ಯಂತರ ಜಾಮೀನು ಕೋರಿ ಆತ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿದೆ.