ನವದೆಹಲಿ,ಏ 22 (DaijiworldNews/MS): ಕಾಂಗ್ರೆಸ್ ನಲ್ಲಿ ತಮ್ಮನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್, ಗುಜರಾತ್ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಂತೆಯೇ ಬಿಜೆಪಿಯನ್ನು ಹೊಗಳಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.
ಪಾಟಿದಾರ್ ಸಮಾಜದ ದೊಡ್ಡ ನಾಯಕ ಹಾಗೂ ರಾಜ್ಯ ಕಾಂಗ್ರೆಸ್ನ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ " ಬಿಜೆಪಿಯ ಬಗ್ಗೆ ಕೆಲವು ಒಳ್ಳೆಯ ವಿಷಯಗಳು ಮತ್ತು ನಾವು ಅದನ್ನು ಒಪ್ಪಿಕೊಳ್ಳಬೇಕು" ಎಂದು ಹೊಗಳಿದ್ದರೂ, ಬಿಜೆಪಿ ಸೇರ್ಪಡೆಯಾಗಲು ಮಾತುಕತೆ ನಡೆಸುತ್ತಿದ್ದಾರೆ ಎಂಬ ವದಂತಿಗಳನ್ನು ಅವರು ನಿರಾಕರಿಸಿದ್ದಾರೆ.
"ರಾಜಕೀಯವಾಗಿ ಬಿಜೆಪಿ ತೆಗೆದುಕೊಂಡ ಇತ್ತೀಚಿನ ನಿರ್ಧಾರಗಳು, ಅಂತಹ ಕ್ರಮಗಳನ್ನು ತೆಗೆದುಕೊಳ್ಳುವ ಶಕ್ತಿ ಅವರಿಗೆ ಇದೆ ಎಂದು ನಾವು ಒಪ್ಪಿಕೊಳ್ಳಬೇಕು. ಅವರ ಪರವಾಗಿ ನಿಲ್ಲದೆ ಅಥವಾ ಅವರನ್ನು ಹೊಗಳದೆ, ನಾವು ಕನಿಷ್ಠ ಸತ್ಯವನ್ನು ಒಪ್ಪಿಕೊಳ್ಳಬಹುದು ಎಂದು ನಾನು ನಂಬುತ್ತೇನೆ" ಎಂದು ಹೇಳಿದ್ದಾರೆ
"ನನಗೆ ಯಾರ ಮೇಲೂ ವೈಯಕ್ತಿಕ ಸಿಟ್ಟು ಇಲ್ಲ ಆದರೆ ರಾಜ್ಯ ನಾಯಕತ್ವದ ಮೇಲೆ ಸಿಟ್ಟಿದೆ.ರಾಜ್ಯದ ಹಿತಾಸಕ್ತಿಯಲ್ಲಿ ರಾಜ್ಯ ನಾಯಕತ್ವಕ್ಕೆ ಜವಾಬ್ದಾರಿ ಇದೆ . ಆದರೆ ಅಲ್ಲಿ ನಡೆಯುತ್ತಿರುವ ಆಂತರಿಕ ಕಿತ್ತಾಟದಿಂದ ಕೆಲವು ವಿಷಯಗಳನ್ನು ತ್ವರಿತವಾಗಿ ಬಗೆಹರಿಸಲು ಆಗುತ್ತಿಲ್ಲ. ಪಕ್ಷದ ಕುರಿತು ಯಾರಾದರೂ ಸತ್ಯವನ್ನು ಹೇಳಿದಾಗ ಅವರು ಪಕ್ಷ ತೊರೆಯುತ್ತಿರುವಂತೆ ವಿಭಿನ್ನವಾಗಿ ನೋಡಲಾಗುತ್ತದೆ" ಎಂದು ಆರೋಪಿಸಿದ್ದಾರೆ.