ಬೆಂಗಳೂರು, ಏ 22 (DaijiworldNews/SM): ಹುಬ್ಬಳ್ಳಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಇದರ ಹಿಂದೆ ಹಲವು ಕಾಣದ ಕೈಗಳು ಕೆಲಸ ಮಾಡಿವೆ ಎಂದು ಆರೋಪಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾದವರನ್ನು ಎಲ್ಲರನ್ನು ಬಂಧಿಸಿವ ಜಾವಾಬ್ದಾರಿ ನಿಭಾಯಿಸಲಾಗುವುದೆಂದು ಸಚಿವರು ಭರವಸೆ ನೀಡಿದ್ದಾರೆ.
ಸಾಮಾಜಿಕ ಸೌಹಾರ್ದತೆ ಕದಡುವ ಸಂಘಟನೆಗಳ ಚಟುವಟಿಕೆಗಳನ್ನು ನಿಯಂತ್ರಿಸುವುದು ಹಾಗೂ ಅಂತಹ ಸಂಘಟನೆಗಳನ್ನು ನಿಷೇಧಿಸುವುದಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವರು ಇದೇ ವೇಳೆ ತಿಳಿಸಿದ್ದಾರೆ.
ಹುಬ್ಬಳ್ಳಿಯ ಘಟನೆಯಲ್ಲಿ ಭಾರಿ ಪ್ರಮಾಣದಲ್ಲಿ ಹಿಂಸಾಚಾರ ನಡೆಸಲು ಕೆಲವರು ಸಿದ್ಧತೆ ನಡೆಸಿದ್ದರು. ಆದರೆ, ಅದನ್ನು ಮಟ್ಟ ಹಾಕಲು ಸರಕಾರ ಶಕ್ತವಾಗಿದೆ. ಹಾಗೂ ನಮ್ಮ ಪೊಲೀಸ್ ಇಲಾಖೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಿದೆ. ಆದರೆ, ಸ್ಪಷ್ಟವಾಗಿ ಯಾವ ಸಂಘಟನೆಯ ಕೈವಾಡ ಇದರ ಹಿಂದೆ ಇದೆ ಎನ್ನುವುದನ್ನು ಶೀಘ್ರವೇ ಬಹಿರಂಗಗೊಳಿಸಲಾಗುವುದೆಂದು ಅವರು ಸ್ಪಷ್ಟಪಡಿಸಿದ್ದಾರೆ.