ಶಿವಮೊಗ್ಗ, ಏ 23 (DaijiworldNews/HR): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನನ್ನದು ಒಂದು ಪರ್ಸೆಂಟ್ ತಪ್ಪಿದ್ದರೂ ಶಿಕ್ಷೆಯಾಗಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ತಪ್ಪಿಲ್ಲ. ನನ್ನದು ಒಂದು ಪರ್ಸೆಂಟ್ ತಪ್ಪಿದ್ದರೂ ಶಿಕ್ಷೆಯಾಗಲಿ ನಾನು ಆರೋಪ ಮುಕ್ತನಾಗುತ್ತೇನೆ ಎಂದರು.
ಇನ್ನು ಸಂತೋಷ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಅಧಿಕಾರಿಗಳು ಎಲ್ಲಾ ರೀತಿಯಲ್ಲಿಯೂ ತನಿಖೆ ನಡೆಸಲಿದ್ದಾರೆ. ಪ್ರಕರಣದಲ್ಲಿ ನಾನು ನಿರ್ದೋಷಿಯಾಗಿ ಹೊರಬರುತ್ತೇನೆ. ತನಿಖೆ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಹೇಳಿದ್ದಾರೆ.