ಶ್ರೀನಗರ, ಏ 23 (DaijiworldNews/HR): ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ಮಧ್ಯೆ ಎನ್ಕೌಂಟರ್ ನಡೆದು ಓರ್ವ ಉಗ್ರನನ್ನು ಹತ್ಯೆ ಮಾಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದಿದೆ.
ಹತ್ಯೆಗೀಡಾದ ಭಯೋತ್ಪಾದಕ ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವನಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಭಯೋತ್ಪಾದಕರು ಕುಲ್ಗಾಮ್ ಜಿಲ್ಲೆಯ ಮಿರ್ಹಾಮಾ ಪ್ರದೇಶದಲ್ಲಿ ಅಡಗಿ ಕುಳಿತಿರುವ ಮಾಹಿತಿಯ ಮೇರೆಗೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದ್ದು, ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆಯೂ ನಡೆಸಿದ ಪ್ರತಿ ದಾಳಿಯಲ್ಲಿ ಇಲ್ಲಿಯವರೆಗೆ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಿದ್ದಾರೆ.