ಶ್ರೀನಗರ, ಏ 24 (DaijiworldNews/DB): ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನೆ ನಡೆಸಿದ ಎನ್ಕೌಂಟರ್ನಲ್ಲಿ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ಕುಲ್ಗಾಂ ಜಿಲ್ಲೆಯ ಮಿರ್ಹಾಮಾದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಸೇನೆಗೆ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಆರಂಭಿಸಲಾಗಿತ್ತು. ಈ ವೇಳೆ ಭದ್ರತಾ ಪಡೆಗಳು ತಲುಪಿದ ವಿಚಾರ ಗೊತ್ತಾಗಿ ಉಗ್ರರು ಗುಂಡಿನ ದಾಳಿ ನಡೆಸಿದರು. ತತ್ಕ್ಷಣ ಪ್ರತಿದಾಳಿ ನಡೆಸಿದ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಭಾನುವಾರ ಮಾಹಿತಿ ನೀಡಿದ್ದಾರೆ.
ಇನ್ನೂ ಇಬ್ಬರು ಉಗ್ರರು ಸ್ಥಳದಲ್ಲಿಅಡಗಿ ಕುಳಿತಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಹತ್ಯೆಯಾದ ಉಗ್ರರ ಬಳಿಯಿದ್ದ ಸ್ಫೋಟಕ ವಸ್ತುಗಳು, ಶಸ್ತ್ರಾಸ್ತ್ರಗಳು, 7 ಎಕೆ ನಿಯತಕಾಲಿಕೆಗಳು, 9 ಗ್ರೆನೇಡ್ಗಳು, 2 ಎಕೆ ರೈಫಲ್ಸ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.