ಮುಂಬೈ, ಏ 24 (DaijiworldNews/DB): ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಮನೆ ಮುಂಭಾಗದಲ್ಲಿ ಹನುಮಾನ್ ಚಾಲೀಸಾ ಪಠಿಸುವ ಹೇಳಿಕೆ ನೀಡಿದ್ದ ಅಮರಾವತಿ ಸಂಸದೆ ನವನೀತ್ ಕೌರ್ ರಾಣಾ, ಆಕೆಯ ಪತಿ ರಾಣಾ ಕೌರ್ ಅವರನ್ನು ಪೊಲೀಸರು ಬಂಧಿಸಿದ್ದು, ಭಾನುವಾರ ಕೋರ್ಟ್ಗೆ ಹಾಜರುಪಡಿಸಲಾಗುತ್ತದೆ.
ಮುಖ್ಯಮಂತ್ರಿ ಉದ್ಭವ್ ಠಾಕ್ರೆ ನಿವಾಸದ ಮುಂಭಾಗ ಹನುಮಾನ್ ಚಾಲೀಸಾ ಪಠಿಸುತ್ತೇವೆ ಎಂದು ದಂಪತಿ ಪ್ರಕಟಿಸಿದ್ದರು. ಇದರಿಂದಾಗಿ ದಂಪತಿ ವಾಸವಾಗಿದ್ದ ಅಪಾರ್ಟ್ಮೆಂಟ್ ಮುಂಭಾಗ ಶಿವಸೇನೆ ಕಾರ್ಯಕರ್ತರು ಜಮಾಯಿಸಿ ಘೋಷಣೆಗಳನ್ನು ಕೂಗಿದ್ದರು. ಬಳಿಕ ತಮ್ಮ ನಿರ್ಧಾರವನ್ನು ಹಿಂಪಡೆಯಲು ತೀರ್ಮಾನಿಸಿದ್ದೇವೆ ಎಂದು ನವನೀತ್ ಕೌರ್ ದಂಪತಿ ಪ್ರಕಟಿಸಿದ್ದರು. ಈ ಘೋಷಣೆ ಬಳಿಕ ಅವರನ್ನು ಶನಿವಾರ ಪಶ್ಚಿಮ ಮುಂಬೈನ ಖಾರ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದಂಪತಿಯನ್ನು ಬಾಂದ್ರಾದ ರಜೆ ಕಾಲದ ನ್ಯಾಯಾಲಯದ ಮುಂದೆ ಭಾನುವಾರ ಹಾಜರುಪಡಿಸಲಾಗುತ್ತದೆ.