ಬೆಂಗಳೂರು, ಏ 24 (DaijiworldNews/DB): ರಾಜ್ಯದಲ್ಲಿ ಗಲಭೆ ಪ್ರಕರಣಗಳನ್ನು ಮಟ್ಟ ಹಾಕಲು ರಾಜ್ಯ ಸರ್ಕಾರ ಬುಲ್ಡೋಜರ್ ಪ್ರಯೋಗ ಮಾಡಬೇಕು. ಎಂದು ಮಾಜಿ ಸಚಿವ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಗಲಭೆ ಸೃಷ್ಟಿಸಿದವರ ಆಸ್ತಿ-ಪಾಸ್ತಿಗಳನ್ನು ಮುಟ್ಟುಗೋಲು ಹಾಕಬೇಕು. ಅಲ್ಲದೆ ಮುಂದೆ ರಾಜ್ಯದಲ್ಲಿ ಇಂತಹ ಗಲಭೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಉತ್ತರಪ್ರದೇಶದ ಮಾದರಿಯಲ್ಲಿ ಬುಲ್ಡೋಜರ್ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಇಂತಹ ಕಠಿಣ ಕ್ರಮಗಳನ್ನು ಕೈಗೊಂಡರೆ ಮಾತ್ರ ಗಲಭೆಯನ್ನು ಮಟ್ಟ ಹಾಕಲು ಸಾಧ್ಯ. ಉತ್ತರ ಪ್ರದೇಶದಂತೆ ಮಧ್ಯಪ್ರದೇಶದಲ್ಲೂ ಬುಲ್ಡೋಜರ್ ಮಾದರಿ ಜಾರಿಗೊಳಿಸಲಾಗಿದೆ. ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಯೋಚಿಸಬೇಕು ಎಂದವರು ತಿಳಿಸಿದರು.