ಮುಂಬೈ, ಏ 25 (DaijiworldNews/HR): ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸದ ಹೊರಗೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಘೋಷಿಸಿದ್ದ ಪಕ್ಷೇತರ ಶಾಸಕ ರವಿ ರಾಣಾ ಮತ್ತು ಅವರ ಪತ್ನಿ, ಸಂಸದೆ ನವನೀತ್ ರಾಣಾ ಅವರ ವಿರುದ್ಧ ಮುಂಬೈ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದು, ಮ್ಯಾಜಿಸ್ಟ್ರೇಟ್ ಕೋರ್ಟ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಸಂಸದೆ ನವನೀತ್ ರಾಣಾ ಅವರನ್ನು ಮುಂಬೈನ ಬೈಕುಲ್ಲಾ ಜೈಲಿನಲ್ಲಿ ಇರಿಸಲಾಗಿದ್ದು, ಅವರ ಪತಿ, ಶಾಸಕ ರವಿ ರಾಣಾ ಅವರನ್ನು ಮುಂಬೈನ ತಲೋಜಾ ಜೈಲಿಗೆ ಸ್ಥಳಾಂತರಿಸಲಾಗಿದೆ.
ಇನ್ನು ರವಿ ರಾಣಾ ಅವರನ್ನು ಈ ಮೊದಲು ಅರ್ತರ್ ರೋಡ್ ಜೈಲ್ನಲ್ಲಿ ಇರಿಸಲು ತೀರ್ಮಾನಿಸಲಾಗಿದ್ದು, ಅಲ್ಲಿ ಭಾರಿ ಜನಸ್ತೋಮ ನೆರೆದಿದ್ದ ಕಾರಣ ತಲೋಜಾ ಜೈಲಿಗೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ.