ಬೆಂಗಳೂರು, ಏ 25 (DaijiworldNews/DB): ಚುನಾಯಿತ ಜನಪ್ರತಿನಿಧಿಗಳ ಪಕ್ಷಾಂತರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವ ಅಗತ್ಯವಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದರು.
ಬೆಂಗಳೂರು ಪ್ರೆಸ್ಕ್ಲಬ್ನಲ್ಲಿ ಆಯೋಜಿಸಿದ್ದ 'ನವ ಭಾರತದಲ್ಲಿ ಮಾಧ್ಯಮಗಳ ಪಾತ್ರ'ಸಮಾರಂಭವನ್ನುಉದ್ಘಾಟಿಸಿ ಅವರು ಸೋಮವಾರ ಮಾತನಾಡಿದರು.
ಪಕ್ಷಾಂತರ ಎಂಬುದು ದೇಶಕ್ಕೆ ಒಂದು ಪಿಡುಗಾಗಿದೆ. ಚುನಾಯಿತ ಪ್ರತಿನಿಧಿಗಳು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹಾರುವುದು ದೇಶದ ಅಭಿವೃದ್ದಿ ದೃಷ್ಟಿಯಿಂದ ಉತ್ತಮವಲ್ಲ. ಹೀಗಾಗಿ ಇದಕ್ಕೆ ಕಡಿವಾಣ ಹಾಕಬೇಕಾದರೆ ಪಕ್ಷಾಂತರ ನಿಷೇಧ ಕಾಯ್ದೆ ಅಗತ್ಯವಾಗಿದೆ ಎಂದರು.
ಕಾಯ್ದೆಯಲ್ಲಿರುವ ಲೋಪಗಳನ್ನು ಗುರುತಿಸಿ ತಿದ್ದುಪಡಿ ತಂದು ಜಾರಿಗೊಳಿಸಬೇಕು. ರಾಜಕೀಯ ಮೌಲ್ಯಗಳು ಕುಸಿತಕ್ಕೆ ಈ ಪಕ್ಷಾಂತರವೇ ಕಾರಣ. ಪಕ್ಷಾಂತರ ಮಾಡುವವರು ಹುದ್ದೆಗೆ ರಾಜೀನಾಮೆ ಸಲ್ಲಿಸಿ ಮತ್ತೆ ಆಯ್ಕೆಯಾಗುವಂತಾಗಬೇಕು ಎಂದವರು ತಿಳಿಸಿದರು.
ಕಾಯ್ದೆಯಲ್ಲಿನ ಲೋಪಗಳನ್ನು ಗುರುತಿಸಿ ಅವುಗಳಿಗೆ ಸೂಕ್ತ ತಿದ್ದುಪಡಿಗಳನ್ನು ತರಬೇಕು, ಪಕ್ಷಾಂತರದಿಂದಾಗಿ ರಾಜಕೀಯ ಮೌಲ್ಯ ಕುಸಿಯುತ್ತಿದೆ, ಪಕ್ಷಾಂತರ ಮಾಡುವವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಪುನರ್ ಆಯ್ಕೆಯಾಗುವಂತಾಗಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.