ನವದೆಹಲಿ, ಏ 26 (DaijiworldNews/HR): ಪ್ರಧಾನಿ ನರೇಂದ್ರ ಮೋದಿಯಿಂದಾಗಿ 45 ಕೋಟಿಗೂ ಹೆಚ್ಚು ಜನರು ಉದ್ಯೋಗದ ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್, ನವ ಭಾರತದ ಹೊಸ ಘೋಷಣೆಯಾದ 'ಹರ್ ಘರ್ ಬೇರೋಜೆಗಾರಿ, ಘರ್ ಘರ್ ಬೇರೋಜೆಗಾರಿ (ಪ್ರತಿ ಮನೆಯಲ್ಲೂ ನಿರುದ್ಯೋಗವಿದೆ). 75 ವರ್ಷಗಳಲ್ಲಿ, ಇದೇ ಮೊದಲು ಮೋದಿ ಅಂತಹ ಪ್ರಧಾನಿ ಅವರ ಮಾಸ್ಟರ್ ಸ್ಟ್ರೋಕ್ ಗಳಿಂದ 45 ಕೋಟಿಗೂ ಹೆಚ್ಚು ಜನರು ಉದ್ಯೋಗ ಪಡೆಯುವ ಭರವಸೆಯನ್ನು ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಐದು ವರ್ಷಗಳಲ್ಲಿ 2.1 ಕೋಟಿ ಉದ್ಯೋಗಗಳು ಮಾಯವಾಗಿದ್ದು, 45 ಕೋಟಿ ಜನರು ಉದ್ಯೋಗ ಹುಡುಕುವುದನ್ನು ನಿಲ್ಲಿಸಿದ್ದಾರೆ ಎಂದು ಸುದ್ದಿ ವರದಿಯನ್ನು ಉಲ್ಲೇಖಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.