ನವದೆಹಲಿ, ಏ 26 (DaijiworldNews/HR): ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಳೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ನಿಯಂತ್ರಣ ಸಭೆಯನ್ನು ನಡೆಸಲಿದ್ದಾರೆ.
ದೇಶಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿ, ಚರ್ಚಿಸಲಿದ್ದಾರೆ.
ಸದ್ಯ ದೇಶದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ಈಗಾಗಲೇ ಆಯಾ ರಾಜ್ಯದ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದು, ನಾಳೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ನಿಯಂತ್ರಣ ಸಭೆಯನ್ನು ನಡೆಸಲಿದ್ದಾರೆ.