ತುಮಕೂರು,ಏ 26 (DaijiworldNews/HR): ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಧರ್ಮಗಳ ನಡುವೆ ಬೆಂಕಿ ಹಚ್ಚಿ ಚುನಾವಣೆಯಲ್ಲಿ ಮತ ಪಡೆದು, ರಾಜ್ಯದ ಜನರನ್ನು ಯಾಮಾರಿಸುತ್ತೇವೆ ಎಂಬ ಭ್ರಮೆಯಲ್ಲಿದ್ದರೆ ಇದು ಸುಳ್ಳಾಗುವ ಸಮಯ ದೂರ ಇಲ್ಲ ಎಂದು ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜಾತಿ ಧರ್ಮದ ಲೆಕ್ಕಾಚಾರದ ಮೇಲೆ ರಾಜಕೀಯ ಮಾಡುವ ಕಾಂಗ್ರೆಸ್ ಹಿಜಾಬ್ ವಿಚಾರದಲ್ಲಿಯಾವ ಹೇಳಿಕೆಗಳನ್ನು ನೀಡಲಿಲ್ಲ. ಇನ್ನೂ ರಾಜ್ಯ ಸರ್ಕಾರ ಜನರನ್ನು ಎತ್ತಿಕಟ್ಟಿ ಮೌನವಾಗಿ ಕುಳಿತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಹಲವು ವರ್ಷಗಳಿಂದ ಅವಕಾಶ ನೀಡುತ್ತಿದ್ದೀರಾ. ಆದರೆ ಇವರು ಕೊಟ್ಟ ಯಾವ ಆಶ್ವಾಸನೆಗಳನ್ನು ಈಡೇರಿಸಲಿಲ್ಲ. ಕೇವಲ ಸುಳ್ಳಿನ ಆಶ್ವಾಸನೆ ನೀಡುತ್ತಿದ್ದಾರೆ. ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿದೆ. ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ನವರು ಕೂಡ ಕಡಿಮೆಯೇನಲ್ಲ ಸಾವಿನ ಮೆನೆಯಲ್ಲಿ ರಾಜಕೀಯ ಮಾಡಲು ಹೊರಟಿದ್ದಾರೆ. ಸಂತೋಷ್ ಅವರ ಮನೆಗೆ ಸಾಲು ಸಾಲು ಕಾಂಗ್ರೆಸ್ ನಾಯಕರು ಹೋಗಿ ಮಾಧ್ಯಮಗಳ ಮುಂದೆ ಫೋಸ್ ನೀಡಿದ್ರು ಎಂದು ಆರೋಪಿಸಿದ್ದಾರೆ.