ವಿಜಯಪುರ, ಏ 26 (DaijiworldNews/SM): ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಅಲ್ಪ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸರಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೋವಿಡ್ ನಿಯಂತ್ರಣಕ್ಕೆ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಅವರು ತಿಳಿಸಿದರು.
ಅವರು ವಿಜಯಪುರದ ಕೊಡಗಾನೂರ ಹೆಲಿಪ್ಯಾಡ್ನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಬುಧವಾರದಂದು ಪ್ರಧಾನಿ ನರೇಂದ್ರ ಮೋದಿ ಜೊತೆಗೆ ವೀಡಿಯೋ ಸಂವಾದವಿದ್ದು ಪ್ರಧಾನಿ ಮೋದಿ ಉಪಯುಕ್ತ ಸಲಹೆಗಳನ್ನು ಎಲ್ಲಾ ರಾಜ್ಯಗಳ ಸಿಎಂಗಳಿಗೆ ನೀಡಲಿದ್ದಾರೆ.
ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಅವರಿಗೆ ವಿವತಿಸಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು. ಇನ್ನು ಬುಧವಾರದಂದು ಸಿಎಂ ಬಸವರಾಜ್ ಬೊಮ್ಮಾಯಿ ಮಂಗಳೂರು ಪ್ರವಾಸ ಕೈಗೊಳ್ಳಲಿದ್ದು, ಮಂಗಳೂರಿನಿಂದಲೇ ಪ್ರಧಾನಿ ಜೊತೆ ಸಂವಾದದಲ್ಲಿ ಭಾಗವಹಿಸಲಿದ್ದಾರೆ.