ಚೆನ್ನೈ, ಏ 27 (DaijiworldNews/HR): ಚೆನ್ನೈನ ರಾಯಾಪೆಟ್ಟಾದಲ್ಲಿರುವ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅನೇಕ ಅಗ್ನಿಶಾಮಕ ದಳಗಳು ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಈ ಕುರಿತು ಆರೋಗ್ಯ ಕಾರ್ಯದರ್ಶಿ ಡಾ ಜೆ ರಾಧಾಕೃಷ್ಣನ್ರಾಜೀವ್ ಮಾಹಿತಿ ನೀಡಿದ್ದು, ಗಾಂಧಿ ಸರ್ಕಾರಿ ಆಸ್ಪತ್ರೆಯ ಹಳೆಯ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಎಲ್ಲಾ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಎಲ್ಲಾ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಹೊಸ ಮೂರು ಬ್ಲಾಕ್ಗಳು ಬೆಂಕಿಯಿಂದ ಸುರಕ್ಷಿತವಾಗಿವೆ. ಇಲ್ಲಿಯವರೆಗೆ ಯಾವುದೇ ಸಾವು-ನೋವು ಅಥವಾ ಗಾಯಗಳ ವರದಿಯಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.