ಹುಬ್ಬಳ್ಳಿ, ಏ 27 (DaijiworldNews/HR): ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್ನಿಂದಾಗಿ ಹುಬ್ಬಳ್ಳಿಯಲ್ಲಿ ನಡೆದ ಗಲಾಟೆ ಪ್ರಕರಣದ ಪ್ರಮುಖ ಆರೋಪಿ ಗಲಭೆಯ ಮಾಸ್ಟರ್ ಮೈಂಡ್ ಎನ್ನಲಾಗಿರುವ ವಸೀಂ ಪಠಾಣ್ʼಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.
ಗಲಭೆಯ ಮಾಸ್ಟರ್ ಮೈಂಡ್ ಎನ್ನಲಾಗಿರುವ ವಸೀಂ ಪಠಾಣ್ʼಗೆ ಹುಬ್ಬಳ್ಳಿಯ ನಾಲ್ಕನೇ ಜೆಎಂಎಫ್ಸಿ ನ್ಯಾಯಲಯ ಏಪ್ರಿಲ್ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.
ಇನ್ನು ವಸೀಂಗೆ ಇಂದಿಗೆ ಕಸ್ಟಡಿ ಅವಧಿ ಅಂತ್ಯಗೊಂಡಿದ್ದು, ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಮತ್ತೆ ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡದ ಕಾರಣ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.