ಬೆಂಗಳೂರು, ಏ 27 (DaijiworldNews/SM): ರಾಜ್ಯದಲ್ಲಿ 'ಇ-ವಿಧಾನಮಂಡಲ' ಯೋಜನೆ ಜಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯ ಸರಕಾರದ ವಿರುದ್ಧ ಮಾಜಿ ಸಿಎಂ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
2016-17 ರಲ್ಲಿ ರಾಷ್ಟ್ರೀಯ ಮಾಹಿತಿ ಕೇಂದ್ರ 60 ಕೋಟಿ ರೂ. ಯೋಜನಾ ವೆಚ್ಚ ಅಂದಾಜಿಸಿತ್ತು. ಆದರೆ, ಕೇವಲ ಎರಡೇ ವರ್ಷಗಳ ಅಂತರದಲ್ಲಿ ನಾಲ್ಕು ಪಟ್ಟು ಅಂದರೆ ರೂ. 252 ಕೋಟಿಗೆ ಏರಿಕೆಯಾಗಿರುವುದು ರಾಜ್ಯ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಇನ್ನೊಂದು ನಿದರ್ಶನ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.