ಮೈಸೂರು, ಏ 28 (DaijiworldNews/SM) : ಕನ್ನಡ ಪ್ರಾದೇಶಿಕ ಭಾಷೆ, ಹಿಂದಿ ರಾಷ್ಟ್ರೀಯ ಭಾಷೆ. ಹಿಂದಿಯನ್ನು ರಾಷ್ಟ್ರೀಯ ಭಾಷೆಯನ್ನಾಗಿ ಮಾಡಬೇಕು ಎಂಬ ಬೇಡಿಕೆ ಮೊದಲಿನಿಂದಲೂ ಇದೆ ಅದರಲ್ಲಿ ತಪ್ಪೇನಿಲ್ಲ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಈ ಬಗ್ಗೆ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ಪ್ರಾದೇಶಿಕ ಭಾಷೆಯಾಗಿದೆ, ಹಿಂದಿ ರಾಷ್ಟ್ರೀಯ ಭಾಷೆ ಎಂದು ನಾವು ಒಪ್ಪಿಕೊಳ್ಳಬೇಕು. ಹಿಂದಿ ಭಾಷೆಯೂ ನಮಗೆ ಬೇಕು. ಬೇರೆ ಭಾಷೆ ಕಲಿಯುವುದರಲ್ಲಿ ತಪ್ಪೇನಿಲ್ಲ. ಹಿಂದಿಯನ್ನ ರಾಷ್ಟ್ರೀಯ ಭಾಷೆಯನ್ನಾಗಿ ಮಾಡಬೇಕು ಎಂಬ ಬೇಡಿಕೆ ಮೊದಲಿನಿಂದಲೂ ಇದೆ, ಇದರಿಂದ ತಪ್ಪೇನಿಲ್ಲ. ಹೆಚ್ಚು ಭಾಷೆ ಕಲಿಯುವುದರಿಂದ ನಾವು ಶ್ರೀಮಂತರಾಗ್ತಿವಿ. ನಾವು ಕನ್ನಡಿಗರು, ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು. ಆ ಬಳಿಕ ಬೇರೆ ಬೇರೆ ಭಾಷೆಗಳನ್ನು ಕಲಿಯಬೇಕು. ನಾನು ಗ್ರಾಮೀಣ ಪ್ರದೇಶದವನಾಗಿರುವುದರಿಂದ ಕನ್ನಡವನ್ನ ಹೆಚ್ಚು ಪ್ರೀತಿಸುತ್ತೇನೆ ಎಂದರು.