ಬೆಂಗಳೂರು, ಏ 29 (DaijiworldNews/HR): ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸಿಐಡಿ ಪೊಲೀಸರು ಬಂಧಿಸಿದ್ದು, ಈ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ದಿವ್ಯಾ ಹಾಗರಗಿ ಅವರ ಜೊತೆಗೆ ಮೂವರು ಆರೋಪಿಗಳ ಬಂಧನವಾಗಿದ್ದು ಇನ್ನಿಬ್ಬರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದ್ದು,ಈ ಪ್ರಕರಣದಲ್ಲಿ ನಿಸ್ಪಕ್ಷಪಾತವಾಗಿ ತನಿಖೆ ನಡೆಸಲಿದೆ ಎಂದರು.
ಇನ್ನು ಸಿಐಡಿ ತಂಡ ಉತ್ತಮವಾಗಿದ್ದು ಈ ಪ್ರಕರಣದಲ್ಲಿ ನಿಸ್ಪಕ್ಷಪಾತವಾಗಿ ತನಿಖೆ ನಡೆಸಲಿದೆ, ಎಷ್ಟೇ ಪ್ರಭಾವಿಗಳಿದ್ದರೂ ಸರ್ಕಾರ ಯಾವುದೇ ಕಾರಣಕ್ಕೂ ಮಧ್ಯೆ ಪ್ರವೇಶಿಸುವುದಿಲ್ಲ ಎಂದಿದ್ದಾರೆ.
ತನಿಖೆಯಿಂದ ಎಲ್ಲಾ ಮಾಹಿತಿಗಳು ಹೊರಬರಲಿದ್ದು, ಈ ಪ್ರಕರಣ ಹಿಂದೆ ಪ್ರಭಾವಿ ನಾಯಕರ ಕೈವಾಡವಿದೆ ಎಂದು ಸಂದೇಹ ಕೂಡ ಇದೆ, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಖಾತ್ರಿ ಮಾಡಿಕೊಂಡು ಹೋಗಿ ಬಂಧಿಸಿರುವುದರಿಂದ ಆರೋಪಿಗಳನ್ನು ಬಂಧಿಸುವಲ್ಲಿ ತಡವಾಯಿತು ಎಂದು ತಿಳಿಸಿದ್ದಾರೆ.