ನವದೆಹಲಿ, ಏ 29 (DaijiworldNews/DB): ಸೇನೆಯ ನೂತನ ಉಪ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಬಿ.ಎಸ್. ರಾಜು ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.
ಈ ಕುರಿತು ಸಾರ್ವಜನಿಕ ಮಾಹಿತಿಯ ಹೆಚ್ಚುವರಿ ಮಹಾನಿರ್ದೇಶನಾಲಯ ಮಾಹಿತಿ ನೀಡಿದೆ. ಲೆಫ್ಟಿನೆಂಟ್ ಜನರಲ್ ಬಿ.ಎಸ್. ರಾಜು ಅವರು ಮೇ 1ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಟ್ವೀಟ್ ಮಾಡಿದೆ.