ಶಿವಮೊಗ್ಗ, ಏ 29 (DaijiworldNews/HR): ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಇಡಬೇಡಿ ಎಂದು ಹೇಳಿದ್ದೇನೆ. ಯಾವ ಕಾರಣಕ್ಕೂ ಬೇಡ. ನನ್ನ ಹೆಸರು ಸೂಕ್ತ ಅಲ್ಲ. ಸ್ವಾತಂತ್ರ್ಯ ಹೋರಾಟಗಾರರು, ಬೇರೆ ಯಾರದ್ದಾದರೂ ಇಡಲು ಮನವಿ ಮಾಡಿದ್ದೇನೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದ ಜನತೆಗೆ ರಂಜಾನ್ ಶುಭಾಶಯ ಕೋರಿ ಮಾತನಾಡಿದ ಅವರು, .ಹಿಂದೂ ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಬದುಕಬೇಕೆನ್ನುವುದು ನಮ್ಮ ಅಪೇಕ್ಷೆ. ಇದಕ್ಕೆ ಎಲ್ಲರೂ ಕೂಡ ಸಹಕಾರ ನೀಡಬೇಕು ಎಂದಿದ್ದಾರೆ.
ಇನ್ನು ರಾಜ್ಯದಲ್ಲಿ 150 ಸ್ಥಾನ ಗುರಿಯಿಟ್ಟು, ಒಬ್ಬೊಬ್ಬರು ಒಂದೊಂದು ಜಿಲ್ಲಾ ಪ್ರವಾಸ ಮಾಡುತ್ತಿದ್ದೇವೆ. ವಾರಕ್ಕೊಂದು ಜಿಲ್ಲೆಗೆ ಹೋಗಿ ಪಕ್ಷದ ಸಂಘಟನೆಯನ್ನು ಬಲಪಡಿಸುತ್ತೇವೆ. ಮುಂಬರುವ ವಿಧಾನಸಭೆಯಲ್ಲಿ 150 ಸ್ಥಾನ ಗೆಲ್ಲುವ ಗುರಿಯೊಂದಿಗೆ ನಮ್ಮನ್ನು ನಾವು ತೊಡಗಿಸಿಕೊಂಡಿದ್ದೇವೆ ಎಂದರು.
ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಬೊಮ್ಮಾಯಿ ನಾಳೆ ದೆಹಲಿಗೆ ಹೋಗುತ್ತಿದ್ದಾರೆ. ಇದರ ಬಗ್ಗೆ ಅಲ್ಲಿಯೇ ಸಮಾಲೋಚನೆ ಮಾಡಬಹುದು ಎಂದು ಹೇಳಿದ್ದಾರೆ.